ಬೆಂಡೆಕಾಯಿ ತಿನ್ನುವುದರಿಂದ ಸಿಗುವ ಅದ್ಭುತ ಆರೋಗ್ಯ ಪ್ರಯೋಜನಗಳು | Bendekayi Benefits in Kannada
ಬೆಂಡೆಕಾಯಿಯ ಅದ್ಭುತ ಆರೋಗ್ಯ ಪ್ರಯೋಜನಗಳು (Ladies Finger Benefits in Kannada) ಹೌದು ಸ್ನೇಹಿತರೆ ನಮ್ಮ ದೈನಂದಿನ ಅಡುಗೆಯಲ್ಲಿ ಹೆಚ್ಚಾಗಿ ಬಳಸುವ ತರಕಾರಿಗಳಲ್ಲಿ ಬೆಂಡೆಕಾಯಿ (Okra) ಪ್ರಮುಖವಾದದ್ದು. ಸಾಮಾನ್ಯವಾಗಿ ಮಕ್ಕಳಿಗೆ ಬೆಂಡೆಕಾಯಿ ತಿಂದರೆ ಗಣಿತ ಚೆನ್ನಾಗಿ ಬರುತ್ತದೆ, ನೆನಪಿನ ಶಕ್ತಿ ಹೆಚ್ಚುತ್ತದೆ ಎಂದು ಹಿರಿಯರು ಹೇಳುವುದನ್ನು ನಾವು ಕೇಳಿರುತ್ತೇವೆ. ಇದು ಕೇವಲ ನಂಬಿಕೆಯಲ್ಲ, ವಿಜ್ಞಾನದ ಪ್ರಕಾರವೂ ಬೆಂಡೆಕಾಯಿಯಲ್ಲಿ ಮೆದುಳಿನ ಬೆಳವಣಿಗೆಗೆ ಮತ್ತು ಇಡೀ ದೇಹದ ಆರೋಗ್ಯಕ್ಕೆ ಬೇಕಾದ ಪೋಷಕಾಂಶಗಳು ಸಮೃದ್ಧವಾಗಿವೆ. ಇದರಲ್ಲಿ ವಿಟಮಿನ್ ಸಿ, ವಿಟಮಿನ್ ಕೆ, ನಾರಿನಂಶ (Fiber), ಮತ್ತು ಆಂಟಿಆಕ್ಸಿಡೆಂಟ್‌ಗಳು ಹೇರಳವಾಗಿವೆ. ದಿನಾಲೂ ಬೆಂಡೆಕಾಯಿ ಬಳಸುವುದರಿಂದ ಸಿಗುವ ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ 1. ಮಧುಮೇಹ ನಿಯಂತ್ರಣಕ್ಕೆ ರಾಮಬಾಣ (Controls Diabetes) ಬೆಂಡೆಕಾಯಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Blood Sugar) ನಿಯಂತ್ರಣದಲ್ಲಿಡಲು ಭಾರಿ ಸಹಾಯ ಮಾಡುತ್ತದೆ. ಬೆಂಡೆಕಾಯಿಯಲ್ಲಿರುವ ಕೆಲವು ನೈಸರ್ಗಿಕ ಅಂಶಗಳು ಜೀರ್ಣಾಂಗ ನಾಳದಲ್ಲಿ ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತವೆ. ರಾತ್ರಿ ಎರಡು ಬೆಂಡೆಕಾಯಿಗಳನ್ನು ಮಧ್ಯಕ್ಕೆ ಕತ್ತರಿಸಿ ಒಂದು ಲೋಟ ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಎದ್ದು ಆ ನೀರನ್ನು ಕುಡಿಯುವುದರಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ ಎಂದು ಆಯುರ್...